ಚುನಾವಣಾ ಆಯೋಗ ಕೇಂದ್ರ ಸರಕಾರದ ಕೈಗೊಂಬೆ: ದಿನೇಶ್ ಗುಂಡೂರಾವ್
ಬೆಳಗಾವಿ, ಎ.11: ಆದಾಯ ತೆರಿಗೆ ಇಲಾಖೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಿರೋಧ ಪಕ್ಷಗಳ ಅಭ್ಯರ್ಥಿಗಳನ್ನು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಆದರೂ, ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳದೆ, ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ದೂರಿದರು.
ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿಯವರು ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಕುರಿತು ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ಬಿಜೆಪಿಯವರು ಸತ್ಯ ಹರಿಶ್ಚಂದ್ರರಾ? ಇದು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಅಲ್ಲವೇ ಅಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Next Story