ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ನಗದು ವಶ
ಚಾಮರಾಜನಗರ, ಎ.14: ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆರಕಣಾಂಬಿ-ಗುಂಡ್ಲುಪೇಟೆ ರಸ್ತೆಯ ದರ್ಗಾದ ಬಳಿ ವಾಹನದಲ್ಲಿ ದಾಖಲೆ ಇಲ್ಲದೆ ಕೊಂಡೊಯ್ಯುತ್ತಿದ್ದ 2,50,000 ರೂ.ಗಳನ್ನು ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡು ರಾಜ್ಯದ ನೋಂದಣಿ ಸಂಖ್ಯೆಯುಳ್ಳ ವಾಹನದಲ್ಲಿ ಶೇಖರ್ ಎಂಬುವರಿಂದ ದಾಖಲೆ ಇಲ್ಲದ 2,50,000 ರೂ. ಹಣವನ್ನು ಮತ್ತು ವಾಹನವನ್ನು ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡು ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story