ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಮತದಾನ
ಮೈಸೂರು, ಎ.18: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ತಾಲೂಕಿನ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದರು.
ತಮ್ಮ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರ ಜೊತೆ ಗುರುವಾರ ಮತಗಟ್ಟೆಗೆ ಆಗಮಿಸಿದ ಅವರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು.
ಸಿದ್ದರಾಮನಹುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 86ರಲ್ಲಿ ಅವರು ಮತ ಚಲಾಯಿಸಿದರು.
ಸಿದ್ದರಾಮಯ್ಯರನ್ನು ಕಂಡ ಗ್ರಾಮಸ್ಥರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದರು.
Next Story