---

​ಮೈತ್ರಿ ಸರಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ

ಬೆಂಗಳೂರು, ಎ. 22: ಲೋಕಸಭೆಯ ಎರಡನೆ ಹಂತದ ಚುನಾವಣೆ ಪ್ರಚಾರಕ್ಕೆ ತೆರೆಬಿದ್ದ ಬೆನ್ನಲ್ಲೆ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಹಾಗೂ ವಿಪಕ್ಷ ಬಿಜೆಪಿ ಮುಖಂಡರಿಗೆ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸವಾಲು ಎದುರಾಗಿದೆ.

ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆ ಹಾಗೂ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾಗಿರುವ ಎರಡೂ ಕ್ಷೇತ್ರಗಳಿಗೆ ಇಂದು (ಎ.22) ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆಗೆ ಪ್ರಕ್ರಿಯೆ ಆರಂಭವಾಗಿದೆ. ಆದರೆ, ರಾಜಕೀಯ ಪಕ್ಷಗಳು ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

ಎರಡೂ ಕ್ಷೇತ್ರಗಳಿಗೆ ಮೇ 19ಕ್ಕೆ ಉಪಚುನಾವಣೆ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್-ಜೆಡಿಎಸ್ ಮತ್ತು ವಿಪಕ್ಷ ಬಿಜೆಪಿಗೆ ಎರಡೂ ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಮತ್ತೊಂದು ಸುತ್ತಿನ ಪ್ರಚಾರದ ಅಖಾಡಕ್ಕೆ ಇಳಿಯಲು ಮುಖಂಡರು ಸನ್ನದ್ಧರಾಗಿದ್ದಾರೆ.

2018ರ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಾ.ಉಮೇಶ್ ಜಾಧವ್ 19,212 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುನಿಲ್ ವಲ್ಯಾಪುರೆ ವಿರುದ್ಧ ಗೆಲುವು ದಾಖಲಿಸಿದ್ದರು. ಅದೇ ರೀತಿ ಕುಂದಗೋಳ ಕ್ಷೇತ್ರದಲ್ಲಿ ಸಿ.ಎಸ್.ಶಿವಳ್ಳಿ ಅವರು ಬಿಜೆಪಿಯ ಸಿ.ಎಸ್.ಈಶ್ವರ್ ಗೌಡ ವಿರುದ್ಧ ಕೇವಲ 634 ಮತಗಳ ಅಂತರದಿಂದ ಜಯದ ನಗೆ ಬೀರಿದ್ದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೇಸಿಗೆ ಬಿಸಿಲಿನ ನಡುವೆ ಅಭ್ಯರ್ಥಿಗಳ ಪರ ಮತಯಾಚನೆಗೆ ಪ್ರಚಾರಕ್ಕೆ ಬೆವರು ಹರಿಸಿದ್ದ ಘಟಾನುಘಟಿ ಮುಖಂಡರು, ಇದೀಗ ಉಪಚುನಾವಣಾ ಪ್ರಚಾರಕ್ಕೆ ಮತ್ತೊಂದು ಸುತ್ತಿನ ಪ್ರಚಾರಕ್ಕಿಳಿಯುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಎ.29ಕ್ಕೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎ.30ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು ಮೇ 2ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಂದಿನಿಂದಲೇ ಉಪ ಚುನಾವಣಾ ಪ್ರಚಾರದ ಅಬ್ಬರ ಆರಂಭವಾಗುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಇನ್ನಿತರ ಮುಖಂಡರು ಉಪಸಮರದ ಪ್ರಚಾರ ಅಖಾಡಕ್ಕೆ ಇಳಿಯಲಿದ್ದಾರೆ.

224 ಸಂಖ್ಯಾಬಲದ ವಿಧಾನಸಭೆಯಲ್ಲಿ ಡಾ.ಉಮೇಶ್ ಜಾಧವ್ ರಾಜೀನಾಮೆ, ಸಿ.ಎಸ್.ಶಿವಳ್ಳಿ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ-78, ಜೆಡಿಎಸ್ 37, ಬಿಎಸ್ಪಿ-1, ಬಿಜೆಪಿ-104 ಹಾಗೂ ಪಕ್ಷೇತರ-2 ಸೇರಿದಂತೆ ವಿಧಾನಸಭೆಯ ಚುನಾಯಿತ ಸಸ್ಯರ ಸಂಖ್ಯಾಬಲ 222ಕ್ಕೆ ಕುಸಿದಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಅಮಾನತ್ತುಗೊಂಡಿರುವ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಹಾಗೂ ಬಿ.ನಾಗೇಂದ್ರ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ಮೂವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್, ಸ್ಪೀಕರ್‌ಗೆ ದೂರು ನೀಡಿದೆ.

104 ಸಂಖ್ಯಾಬಲದ ಬಿಜೆಪಿ, ಮೈತ್ರಿ ಸರಕಾರದ ಸಂಖ್ಯಾಬಲ ಕುಗ್ಗಿಸಲು ‘ಆಪರೇಷನ್ ಕಮಲ’ದ ಮೂಲಕ ಯತ್ನಿಸುತ್ತಿದೆ. ಈ ಮಧ್ಯೆ ಉಪ ಚುನಾವಣೆಯೂ ಬಿಜೆಪಿಗೆ ಸವಾಲಾಗಿದ್ದು, ತನ್ನ ಸಂಖ್ಯಾಬಲ ವೃದ್ಧಿಗೆ ಇನ್ನಿಲ್ಲದ ಪ್ರಯತ್ನ ನಡೆಸಿರುವುದು ಗುಟ್ಟಾಗೇನು ಉಳಿದಿಲ್ಲ.

ಕಾಂಗ್ರೆಸಿನ 78 ಮಂದಿ ಪೈಕಿ 3 ಮಂದಿ ಅಮಾನತ್ತುಗೊಳಿಸಿದರೆ ಕಾಂಗ್ರೆಸ್ ಸಂಖ್ಯೆ 75ಕ್ಕೆ ಕುಸಿಯಲಿದೆ. ಕಾಂಗ್ರೆಸ್-75, ಜೆಡಿಎಸ್ ಹಾಗೂ ಬಿಎಸ್ಪಿ 38, ಓರ್ವ ಪಕ್ಷೇತರ ಸದಸ್ಯ ನಾಗೇಶ್ ಮೈತ್ರಿ ಸರಕಾರಕ್ಕೆ ಬೆಂಬಲ ನೀಡಿರುವುದರಿಂದ ಸದ್ಯದ ಮಟ್ಟಿಗೆ ಸರಕಾರದ ಬಹುಮತಕ್ಕೆ ಯಾವುದೇ ತೊಂದರೆಯಿಲ್ಲ. ಆದುದರಿಂದ, ಉಪ ಚುನಾವಣೆಯು ಬಿಜೆಪಿಗಿಂತ ಮೈತ್ರಿಕೂಟದ ಪಾಲಿಗೆ ಅಳಿವು, ಉಳಿವಿನ ಪ್ರಶ್ನೆಯೂ ಆಗಬಹುದು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top