ಲೋಕಸಭಾ ಚುನಾವಣೆ: 1512 ಫ್ಲೈಯಿಂಗ್ ಸ್ಕ್ವಾಡ್ಸ್ ಸಕ್ರಿಯ ಕಾರ್ಯನಿರ್ವಹಣೆ | Vartha Bharati- ವಾರ್ತಾ ಭಾರತಿ

---

ಲೋಕಸಭಾ ಚುನಾವಣೆ: 1512 ಫ್ಲೈಯಿಂಗ್ ಸ್ಕ್ವಾಡ್ಸ್ ಸಕ್ರಿಯ ಕಾರ್ಯನಿರ್ವಹಣೆ

ಬೆಂಗಳೂರು, ಎ.22: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1512 ಫ್ಲೈಯಿಂಗ್ ಸ್ಕ್ವಾಡ್ಸ್ ಮತ್ತು 1837 ಸ್ಟಾಟಿಕ್ ಸರ್ವೆಲೆನ್ಸ್ ಸ್ಕ್ವಾಡ್‌ಗಳು, 320 ಅಬಕಾರಿ ತಂಡಗಳು ಹಾಗೂ 180 ವಾಣಿಜ್ಯ ತೆರಿಗೆ ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಟಾಟಿಕ್ ಸರ್ವೆಲೆನ್ಸ್ ಸ್ಕ್ವಾಡ್‌ಗಳು ಹಾಗೂ ಪೊಲೀಸ್ ಪ್ರಾಧಿಕಾರಿಗಳು 17.11 ಕೋಟಿ ರೂ.ನಗದು, 65.20 ಲಕ್ಷ ರೂ.ಮೌಲ್ಯದ 18,529 ಲೀಟರ್ ಮದ್ಯ ಹಾಗೂ 7.52 ಲಕ್ಷ ರೂ.ಮೌಲ್ಯದ 143.1 ಕೆಜಿ ಮಾದಕ ದ್ರವ್ಯಗಳನ್ನು ಹಾಗೂ 3.85 ಕೋಟಿ ರೂ.ಮೌಲ್ಯದ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿವೆ.

2012 ಎಫ್‌ಐಆರ್‌ಗಳನ್ನು ಈವರೆಗೆ ದಾಖಲಿಸಿವೆ. ಆದಾಯ ತೆರಿಗೆ ಇಲಾಖೆಯು 22.07 ಕೋಟಿ ರೂ.ನಗದು ಮತ್ತು 7.03 ಕೋಟಿ ರೂ.ಮೌಲ್ಯದ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಇಲಾಖೆಯು 37.05 ಕೋಟಿ ರೂ.ಮೌಲ್ಯದ 9.42 ಲಕ್ಷ ಲೀಟರ್‌ಗಳಷ್ಟು ಮದ್ಯ, 4.48 ಲಕ್ಷ ರೂ.ವೌಲ್ಯದ 14.977 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು, 2589 ಗಂಭೀರ ಪ್ರಕರಣಗಳನ್ನು ದಾಖಲಿಸಿದೆ. ಹಾಗೂ ಮದ್ಯದ ಪರವಾನಿಗೆಯನ್ನು ಉಲ್ಲಂಘಿಸಿದ 3641 ಪ್ರಕರಣಗಳು, 8 ಎನ್‌ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 11,461 ಪ್ರಕರಣಗಳನ್ನು ದಾಖಲಿಸಿದೆ ಮತ್ತು 1381 ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟಾರೆ, 95,429 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ್ತ್ರ ಪರವಾನಿಗೆಯನ್ನು ರದ್ದುಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 45,151 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಡಿ 48,642 ವ್ಯಕ್ತಿಗಳಿಂದ ಮುಚ್ಚಳಿಕೆಯನ್ನು ಪಡೆಯಲಾಗಿದೆ. 40,957 ಜಾಮೀನು ರಹಿತ ವಾರೆಂಟ್‌ಗಳನ್ನು ಚುನಾವಣೆ ಘೋಷಣೆಯಾದ ದಿನಾಂಕದಿಂದ ಈವರೆಗೆ ಜಾರಿಗೊಳಿಸಲಾಗಿದೆ.

ಎಲ್ಲ ತಂಡಗಳು ಸೇರಿ ಒಟ್ಟು 87.43 ಕೋಟಿ ರೂ.ವೌಲ್ಯದ ನಗದು, ಇತರೆ ವಸ್ತುಗಳು, ಮದ್ಯ, ಮಾದಕದ್ರವ್ಯ, ಇತ್ಯಾದಿಗಳನ್ನು ವಶಪಡಿಸಿಕೊಂಡಿವೆ. ಎ.21ರಂದು ಸಂಜೆ 5.25ಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು 14.01 ಲಕ್ಷ ರೂ.ನಗದು ವಶಪಡಿಸಿಕೊಂಡಿದೆ. ಮುಂದಿನ ಕ್ರಮ ಕೈಗೊಳ್ಳಲು ಈ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೆ ತಿಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top