ರಾಜ್ಯದ ಎರಡನೆ ಹಂತದ ಮತದಾನ: ಪ್ರಮುಖ ಘಟಾನುಘಟಿಗಳಿಂದ ಹಕ್ಕು ಚಲಾವಣೆ | Vartha Bharati- ವಾರ್ತಾ ಭಾರತಿ

---

ರಾಜ್ಯದ ಎರಡನೆ ಹಂತದ ಮತದಾನ: ಪ್ರಮುಖ ಘಟಾನುಘಟಿಗಳಿಂದ ಹಕ್ಕು ಚಲಾವಣೆ

ಬೆಂಗಳೂರು, ಎ.23: ರಾಜ್ಯದಲ್ಲಿ ನಡೆದ ಎರಡನೆ ಹಂತದಲ್ಲಿ 14 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ವಿವಿಧ ಕಡೆಗಳಲ್ಲಿ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರಮುಖರು ಮತದಾನ ಮಾಡಿದರು.

ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ, ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ, ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಮಾಜಿ ಸಚಿವೆ ಉಮಾಶ್ರೀ, ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಸೇರಿದಂತೆ ಹಲವರು ಕುಟುಂಬ ಸಮೇತರಾಗಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ 237 ಅಭ್ಯರ್ಥಿಗಳ ರಾಜಕೀಯ ಭವಿಷ್ಯಕ್ಕೆ ಮುದ್ರೆ ಒತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಬಸವನಗರದಲ್ಲಿ ಮತ ಚಲಾಯಿಸಿದರೆ, ಅನಂತ್ ಕುಮಾರ್ ಹೆಗಡೆ ಮತ್ತು ರಮೇಶ್ ಜಿಗಜಿಣಗಿ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಹಕ್ಕು ಚಲಾಯಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪುತ್ರರಾದ ಬಿ.ವೈ.ರಾಘವೇಂದ್ರ ಮತ್ತು ವಿಜಯೇಂದ್ರ ಕುಟುಂಬದ ಸದಸ್ಯರೊಂದಿಗೆ ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಚಿತ್ತೂರು ತಾಲೂಕಿನ ಗುಂಡಗುರ್ಕಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪತ್ನಿಯೊಂದಿಗೆ ಹಕ್ಕನ್ನು ಚಲಾಯಿಸಿದರು.

ಶಿವಮೊಗ್ಗ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಕಲಬುರಗಿಯ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಬೇಡಸೂರು ತಾಂಡದಲ್ಲಿ ಮತ ಚಲಾಯಿಸಿದರೆ, ಧಾರವಾಡದ ವಿವಿಧ ಮತಗಟ್ಟೆಗಳಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ಶಾಸಕ ಪ್ರಸಾದ್ ಅಬ್ಬಯ್ಯ ಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ದಾವಣೆಗೆರೆಯಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್, ಕಾಂಗ್ರೆಸ್ ಅಭ್ಯರ್ಥಿ ಎಚ್.ಬಿ.ಮಂಜಪ್ಪ, ಬಳ್ಳಾರಿಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ವಿ.ಎಸ್.ಉಗ್ರಪ್ಪ, ವೈ.ದೇವೇಂದ್ರಪ್ಪ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಿಂಡಲಗಾ ಮತಗಟ್ಟೆಯ ಆವರಣದಲ್ಲಿಯೇ ಮತಯಾಚನೆ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಮತದಾರರಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಎಲ್ಲರಿಗೂ ಮನವಿ ಮಾಡುತ್ತಿದ್ದ ದೃಶ್ಯಗಳು ಕಂಡುಬಂದಿವೆ. ಈ ವೇಳೆ ಮತಗಟ್ಟೆ ಅಧಿಕಾರಿಗಳೂ ಏನೂ ಮಾಡದೇ ಮೌನವಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top