ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಂಡ್ಯದ ಬಸರಾಳು ಶಾಲೆಗೆ ಶೇ.93 ಫಲಿತಾಂಶ
ಮಂಡ್ಯ, ಮೇ 5: ತಾಲೂಕಿನ ಬಸರಾಳು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.93 ರಷ್ಟು ಫಲಿತಾಂಶ ಗಳಿಸಿದೆ.
ಪರೀಕ್ಷೆ ತೆಗೆದುಕೊಂಡಿದ್ದ 85 ವಿದ್ಯಾರ್ಥಿಗಳಲ್ಲಿ 79 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 20 ವಿದ್ಯಾರ್ಥಿಗಳು ಪ್ರಥಮ, 48 ವಿದ್ಯಾರ್ಥಿಗಳು ದ್ವಿತೀಯ ಮತ್ತು 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಸುಭಾಷ್.ಡಿ 613 ಅಂಕ(ಶೇ.98.08)ಗಳಿಸುವುದರ ಜೊತೆಗೆ ಕನ್ನಡದಲ್ಲಿ 125ಕ್ಕೆ 125, ಸಮಾಜ ವಿಜ್ಞಾನದಲ್ಲಿ 100 ಅಂಕ ಗಳಿಸಿದ್ದರೆ, ಸುಮತಿ.ಎಂ ಒಟ್ಟು 595 ಅಂಕ ಗಳಿಸಿ (ಶೇ.95.20)ಸಮಾಜ ವಿಜ್ಞಾನದಲ್ಲಿ 100 ಅಂಕ ಪಡೆದಿದ್ದಾರೆ. ತೇಜಸ್ವಿನಿ.ಬಿ.ಕೆ 564 ಅಂಕ (ಶೇ.90.24) ಪಡೆದ ಗ್ರಾಮೀಣ ಪ್ರತಿಭೆಗಳಾಗಿದ್ದಾರೆ.
ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳನ್ನು ಉಪಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
Next Story