ಜೆಡಿಎಸ್ ಬಿ ಫಾರಂಗೆ ಸಹಿ ಮಾಡಲು ಜಿಲ್ಲಾಧ್ಯಕ್ಷರಿಗೂ ಅವಕಾಶ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ
ಬೆಂಗಳೂರು, ಮೇ 6: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ನ ಅಭ್ಯರ್ಥಿಗಳಿಗೆ ಜಿಲ್ಲಾ ಮಟ್ಟದ ಅಧ್ಯಕ್ಷರು ಬಿ ಫಾರಂಗಳಿಗೆ ಸಹಿಹಾಕುವ ಅವಕಾಶವನ್ನು ರಾಜ್ಯ ಚುನಾವಣಾ ಆಯೋಗ ಅವಕಾಶ ಕಲ್ಪಿಸಿಕೊಟ್ಟಿದೆ.
ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿಗೆ ಜೆಡಿಎಸ್ನ ಮುಖಂಡರು ಮನವಿ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬದಲಿಗೆ ಜಿಲ್ಲಾ ಮಟ್ಟದ ಅಧ್ಯಕ್ಷರು ಸಹಿ ಮಾಡಲು ಅವಕಾಶ ನೀಡಿದೆ ಎಂದು ಜೆಡಿಎಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೈ.ಎಸ್.ವಿ.ದತ್ತ ಹೇಳಿದ್ದಾರೆ.
ರಾಜ್ಯಾದ್ಯಂತ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳಿಗೆ ನೂರಾರು ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯುತ್ತಾರೆ. ಎಲ್ಲರಿಗೂ ರಾಷ್ಟ್ರೀಯ ಅಧ್ಯಕ್ಷರೇ ಸಹಿ ಮಾಡಿ ಬಿ ಫಾರಂ ವಿತರಣೆ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ, ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದೆವು. ಇದಕ್ಕೆ ಸ್ಪಂದಿಸಿರುವ ಆಯೋಗವು ಕಂದಾಯ ವಿಭಾಗವಾರು ಪದಾಧಿಕಾರಿಗಳು ಜಿಲ್ಲಾವಾರು ಅಧ್ಯಕ್ಷರು ಬಿ ಫಾರಂಗಳಿಗೆ ಸಹಿ ಮಾಡಬಹುದು ಎಂದು ಹೇಳಿದರು ಎಂದು ಅವರು ಮಾಹಿತಿ ನೀಡಿದರು.