ರಸ್ತೆ ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ
ಬೆಂಗಳೂರು, ಮೇ 10: ಮನನೊಂದಿದ್ದ ಯುವಕನೋರ್ವ ರಸ್ತೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ನರಸಿಂಹಮೂರ್ತಿ(28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ.
ಕಾಮಾಕ್ಷಿಪಾಳ್ಯದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಯಾವುದೋ ವಿಚಾರವಾಗಿ ಮನನೊಂದಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದ ನರಸಿಂಹಮೂರ್ತಿ ಗೊರಗುಂಟೆಪಾಳ್ಯದ ರಸ್ತೆ ಸೇತುವೆನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಪೀಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story