---

ಟ್ಯಾಂಕರ್ ಮೂಲಕ ಒದಗಿಸುವ ನೀರಿನ ಗುಣಮಟ್ಟ ಪರಿಶೀಲಿಸಿ: ಅಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಸೂಚನೆ

ಶಿವಮೊಗ್ಗ, ಮೇ 18:  ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅತಿಸಾರ ಬೇಧಿ ನಿಯಂತ್ರಣ ಕಾರ್ಯಕ್ರಮ ಕುರಿತಂತೆ ವಿವಿಧ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಜಿಲ್ಲೆಯ ಹಲವು ಗ್ರಾಮ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದುವರೆಗೆ 29 ಹಳ್ಳಿಗಳಲ್ಲಿ 1180 ಟ್ಯಾಂಕರ್ ನೀರು ಪೂರೈಕೆ ಮಾಡಲಾಗಿದೆ. ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿನ ಮೂಲವನ್ನು ಪರಿಶೀಲನೆ ಮಾಡಬೇಕು. ಅದೇ ರೀತಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕಲುಷಿತ ಕುಡಿಯುವ ನೀರಿನಿಂದಾಗಿ ಅತಿಸಾರ ಬೇಧಿ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಇತ್ತೀಚಿಗೆ ತೀರ್ಥಹಳ್ಳಿ ತಾಲೂಕಿನ ಪಡುವಳ್ಳಿಯಲ್ಲಿ ಕಾಣಿಸಿಕೊಂಡಿರುವ ಅತಿಸಾರ ಬೇಧಿಯನ್ನು ಅಪಾಯದ ಮುನ್ಸೂಚನೆಯಾಗಿ ಪರಿಗಣಿಸಿ ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. 

ಸ್ಥಳೀಯ ಗ್ರಾಮ ಪಂಚಾಯತ್‍ಗಳು ತಮ್ಮ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಮೂಲವನ್ನು ಪರಿಶೀಲಿಸಬೇಕು. ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಸಂಗ್ರಹಾಗಾರಗಳನ್ನು ಸಂಪೂರ್ಣ ಸ್ವಚ್ಛ ಮಾಡಿ ಸುಣ್ಣ ಬಳಿಯಬೇಕು. ನೀರಿಗೆ ಕೇವಲ ಕ್ಲೋರಿನ್ ಹಾಕಿದರೆ ಸಾಲದು, ಗುಣಮಟ್ಟದ ಕುಡಿಯುವ ನೀರು ಪೂರೈಕೆ ಪ್ರಕರಣಗಳಲ್ಲಿ ಸ್ಥಳೀಯ ಅಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಗ್ರಾಮಗಳಲ್ಲಿ ಅತಿಸಾರ ಬೇಧಿ ಪ್ರಕರಣಗಳು ಗಮನಕ್ಕೆ ಬಂದ ತಕ್ಷಣ ಆಶಾ ಕಾರ್ಯಕರ್ತೆಯರು ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಪ್ರತಿಯೊಂದು ಅಂಗನವಾಡಿಗಳಲ್ಲಿ ಒಆರ್‍ಎಸ್ ಪ್ಯಾಕೇಟ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ 132 ಡೆಂಗ್ ಪ್ರಕರಣಗಳು ಹಾಗೂ 32 ಇಲಿಜ್ವರ ಪ್ರಕರಣಗಳು ಕಂಡು ಬಂದಿವೆ. ಆರೋಗ್ಯ ಇಲಾಖೆ ಸ್ಥಳೀಯ ಆಡಳಿತ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು ಬೇಸಿಗೆಯಲ್ಲಿ ಬರುವ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಜಿಲ್ಲೆಯಲ್ಲಿ 132 ಡೆಂಗ್, 32 ಇಲಿಜ್ವರ ಪ್ರಕರಣ ಪತ್ತೆ
ಗ್ರಾಮಗಳಲ್ಲಿ ಅತಿಸಾರ ಬೇಧಿ ಪ್ರಕರಣಗಳು ಗಮನಕ್ಕೆ ಬಂದ ತಕ್ಷಣ ಆಶಾ ಕಾರ್ಯಕರ್ತೆಯರು ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಪ್ರತಿಯೊಂದು ಅಂಗನವಾಡಿಗಳಲ್ಲಿ ಒಆರ್‍ಎಸ್ ಪ್ಯಾಕೇಟ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ 132 ಡೆಂಗ್ ಪ್ರಕರಣಗಳು ಹಾಗೂ 32 ಇಲಿಜ್ವರ ಪ್ರಕರಣಗಳು ಕಂಡು ಬಂದಿವೆ. ಆರೋಗ್ಯ ಇಲಾಖೆ ಸ್ಥಳೀಯ ಆಡಳಿತ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು ಬೇಸಿಗೆಯಲ್ಲಿ ಬರುವ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸಲು ಕ್ರಮ ಕೈಗೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‍ರವರು ತಿಳಿಸಿದ್ದಾರೆ. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top