ಕಲುಷಿತ ಆಹಾರ ಸೇವನೆ ಪ್ರಕರಣ: ಮಾಹಿತಿ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಮೇ 22: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ ಗ್ರಾಮದಲ್ಲಿ ಕಲುಷಿತ ನೀರಿನಿಂದ ತಯಾರಿಸಿದರೆನ್ನಲಾದ ಆಹಾರ ಸ್ವೀಕರಿಸಿ ಬಾಲಕನೊಬ್ಬ ಮೃತಪಟ್ಟು, ಹಲವರು ಅಸ್ವಸ್ಥರಾಗಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಬುಧವಾರ ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಂದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲಾ ಆರೋಗ್ಯಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
Next Story