ಇವಿಎಂ ಬಗ್ಗೆ ಬಿಜೆಪಿ ನಿಲುವು ಬದಲಾಗಲು ಕಾರಣವೇನು?: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, ಮೇ 23: ‘ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದು ಬಿಜೆಪಿ. ಆ ಪಕ್ಷದ ವಕ್ತಾರ ಜಿವಿಎಲ್ ನರಸಿಂಹರಾವ್ ಈ ಬಗ್ಗೆ ಪುಸ್ತಕವನ್ನೇ ಬರೆದಿದ್ದರು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇವಿಎಂ ಬಗೆಗಿನ ಅನುಮಾನವನ್ನು ಬೆಂಬಲಿಸಿ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರು. ‘ಇವಿಎಂ’ ಬಗ್ಗೆ ಈ ಹತ್ತು ವರ್ಷಗಳಲ್ಲಿ ಬಿಜೆಪಿಯ ಬದಲಾದ ನಿಲುವಿಗೆ ಕಾರಣವೇನು? ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರಶ್ನಿಸಿದ್ದಾರೆ.
Next Story