ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಜಿ.ಎ.ಬಾವಾ ನೇಮಕ
ಬೆಂಗಳೂರು, ಮೇ 29: ನಿವೃತ್ತ ಪೊಲೀಸ್ ಅಧಿಕಾರಿ, ಕೆಪಿಸಿಸಿ ಕಾರ್ಯದರ್ಶಿ ಜಿ.ಎ.ಬಾವಾ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧಿನಿಯಮ-1994 ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧಿನಿಯಮ-2011ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಾವಾ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಅಕ್ರಂ ಬಾಷಾ ಅಧಿಸೂಚನೆ ಹೊರಡಿಸಿದ್ದಾರೆ.
Next Story