ಹೊನ್ನಾಳಿ: ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ
ಹೊನ್ನಾಳಿ: ಸಾಲದ ಬಾಧೆಯಿಂದ ಬೇಸತ್ತ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಎಚ್.ಗೋಪಗೊಂಡನಹಳ್ಳಿಯಲ್ಲಿ ನಡೆದಿದೆ.
ಹಾಲೇಶಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ. ಗ್ರಾಮದಲ್ಲಿ ಎರಡುವರೆ ಎಕರೆ ಜಮೀನು ಹೊಂದಿದ್ದ ಹಾಲೇಶಪ್ಪ ಕೈಗಡವಾಗಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಆದರೆ, ಕಾಲಕ್ಕೆ ಸರಿಯಾಗಿ ಮಳೆಯಾಗದೇ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ, ಸಾಲ ತೀರಿಸಲಾಗದೇ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
Next Story