ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಹಳೆಯ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ
ಬೆಂಗಳೂರು, ಜೂ. 3: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್ಗಳಲ್ಲಿ 2019-20ನೆ ಸಾಲಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಹಳೆಯ ಪಾಸ್ ತೋರಿಸಿ ಬಸ್ಗಳಲ್ಲಿ ಪ್ರಯಾಣಿಸಲು ಸಂಸ್ಥೆ ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು 2018-19ನೆ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಬೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.
Next Story