ವಿಷಪೂರಿತ ಹಾವು ಕಡಿದು ಮಹಿಳೆ ಸಾವು
ಶಿವಮೊಗ್ಗ, ಜೂ. 6: ವಿಷಪೂರಿತ ಹಾವೊಂದು ಕಚ್ಚಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಠಲನಗರದಲ್ಲಿ ನಡೆದಿದೆ.
ಜಯಲಕ್ಷ್ಮೀ (55) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪ ಕೆಲಸ ಮಾಡುವಾಗ ಹಾವು ಕಚ್ಚಿದೆ. ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
Next Story