ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಓರ್ವ ಪುತ್ರಿ ಸಾವು
ಇಬ್ಬರ ಸ್ಥಿತಿ ಗಂಭೀರ
ಮಂಡ್ಯ, ಜೂ.13: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ಏಳು ವರ್ಷದ ರಿಯಾ ಸಾವನ್ನಪ್ಪಿದ್ದು, ಮತ್ತೊಬ್ಬ ಮಗಳು ಅಜೀನ ಮತ್ತು ತಾಯಿ ಹಾಜ್ಮಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡವರ ಪರಿಸ್ಥಿತಿ ಗಂಭೀರವಾಗಿದ್ದು, ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story