ಬಿಜೆಪಿ ಸದಸ್ಯತ್ವ ಉಸ್ತುವಾರಿಯಾಗಿ ಎನ್.ರವಿಕುಮಾರ್ ನೇಮಕ
ಬೆಂಗಳೂರು, ಜೂ. 16: ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರನ್ನು ಬಿಜೆಪಿ ಸದಸ್ಯತ್ವ ಅಭಿಯಾನ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಇದೇ ಜೂ.13ರಂದು ನಡೆದ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಘಟನಾ ಪರ್ವವನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಸದಸ್ಯತ್ವ ಅಭಿಯಾನ ಉಸ್ತುವಾರಿ ಶಿವರಾಜ್ ಸಿಂಗ್ ಚವ್ಹಾಣ್ ಆದೇಶ ಹೊರಡಿಸಿದ್ದಾರೆ.
ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಸದಸ್ಯತ್ವ ಅಭಿಯಾನದ ಸಹ ಉಸ್ತುವಾರಿಯಾಗಿ ನೇಮಿಸಿದ್ದು, ನಾಳೆ(ಜೂ.17) ಹೊಸದಿಲ್ಲಿಯಲ್ಲಿ ನಡೆಯಲಿರುವ ಎಲ್ಲ ರಾಜ್ಯಗಳ ಸದಸ್ಯತ್ವ ಉಸ್ತುವಾರಿಗಳ ಸಭೆಯಲ್ಲಿ ಉಭಯ ನಾಯಕರು ಪಾಲ್ಗೊಳ್ಳಲಿದ್ದಾರೆಂದು ಬಿಜೆಪಿ ಪ್ರಕಟನೆ ತಿಳಿಸಿದೆ.
Next Story