ಕಾರು ಢಿಕ್ಕಿ: ಬೈಕ್ ಸವಾರ ಸಾವು
ಶಿವಮೊಗ್ಗ, ಜೂ. 17: ವೇಗವಾಗಿ ಆಗಮಿಸಿದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ವೆಂಕಟೇಶ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲು ಬೈಕ್ ನಿಲ್ಲಿಸಿಕೊಂಡಿದ್ದ ವೇಳೆ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತಕ್ಷಣವೇ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಈ ಸಂಬಂಧ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story