ರಾಹುಲ್ ಗಾಂಧಿ ಹುಟ್ಟುಹಬ್ಬ: ಶುಭ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ
ಹೊಸದಿಲ್ಲಿ, ಜೂ. 19: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ದಿಲ್ಲಿಯಲ್ಲಿ ಅವರನ್ನು ಭೇಟಿ ಮಾಡಿ ಶುಭ ಕೋರಿದರು.
ಬುಧವಾರ ಬೆಳಗ್ಗೆ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಸಿದ್ದರಾಮಯ್ಯ, ಪುಷ್ಪಗುಚ್ಚವನ್ನು ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್, ಮಾಜಿ ಶಾಸಕ ಅಶೋಕ್ ಪಟ್ಟಣ್ ಹಾಜರಿದ್ದರು.
Next Story