ಮೈಸೂರು: ಸಚಿವ ದೇಶಪಾಂಡೆ ನಡೆಸಿದ ಕೆಡಿಪಿ ಸಭೆಗೆ ರೈತರ ಮುತ್ತಿಗೆ
ಮೈಸೂರು, ಜೂ.20: ನಗರದ ಜಿಪಂ ಸಭಾಂಗಣದಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕೆಡಿಪಿ ಸಭೆ ನಡೆಸುವ ವೇಳೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಪ್ರಕೃತಿ ವಿಕೋಪ ಸ್ಥಳಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಸಚಿವರು ನಂತರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಭೆ ನಡೆಸುವ ಸ್ಥಳಕ್ಕೆ ನುಗ್ಗಲು ಯತ್ನಿಸಿದರು. ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.
ಇದರಿಂದ ಕೆರಳಿದ ಪ್ರತಿಭಟನಾಕಾರರು ಬಾಗಿಲ ಬಳಿಯೇ ಕುಳಿತು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಅತ್ತಳ್ಳಿ ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.