ವಾಹನ ಹರಿದು ಅಪರಿಚಿತ ವ್ಯಕ್ತಿ ಮೃತ್ಯು
ಪಾಂಡವಪುರ, ಜೂ.23: ವಾಹನ ಹರಿದು ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗೇಟ್ ಬಳಿ ರವಿವಾರ ಬೆಳಗಿನ ಜಾವ ನಡೆದಿದೆ.
ಮೃತ ಅಪರಿಚಿತ ವ್ಯಕ್ತಿ 45 ರಿಂದ 50 ವರ್ಷದ ವಯೋಮಾನದವರಾಗಿದ್ದಾರೆ. ಭಾರೀ ವಾಹನವೊಂದು ವ್ಯಕ್ತಿಯ ಮೇಲೆ ಹರಿದಿರುವುದರಿಂದ ಮೃತ ವ್ಯಕ್ತಿಯ ದೇಹ ಸಂಪೂರ್ಣ ಛಿಧ್ರ ಛಿದ್ರವಾಗಿದ್ದು, ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪಾಂಡವಪುರ ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪೊಲೀಸರೇ ಶವ ಸಂಸ್ಕಾರ ನಡೆಸಿದ್ದಾರೆ.
Next Story