ಆಟೊ ರಿಕ್ಷಾಕ್ಕೆ ಬಸ್ ಢಿಕ್ಕಿ: ನಾಲ್ವರು ಸ್ಥಳದಲ್ಲೇ ಮೃತ್ಯು
ತುಮಕೂರು, ಜು.4: ಆಟೊ ರಿಕ್ಷಾ ಮತ್ತು ಸರಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ನಾಲ್ವರು ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ 9:45ರ ಸುಮಾರಿಗೆ ಗುಬ್ಬಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಲೂಕಿನ ಕಳ್ಳಿಪಾಳ್ಯ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಗುಬ್ಬಿ ತಾಲೂಕಿನ ಪತ್ರೆಮಟ್ಟಿಗಟ್ಟ ಗ್ರಾಮದವರು ಎಂದು ಗುರುತಿಸಲಾಗಿದ್ದು, ಎ.ಬಸಪ್ಪ(65), ರೇವಕ(55), ಬಸವರಾಜು(45) ಹಾಗೂ ಇನ್ನೊಬ್ಬರು ಮೃತಪಟ್ಟಿದ್ದು, ಅವರ ಗುರುತು ಪತ್ತೆಯಾಗಿಲ್ಲ. ರಮೇಶ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ಕಡದಗುಬ್ಬಿ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ಗುಬ್ಬಿ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story