ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಬಸವರಾಜ ದಡೇಸುಗೂರು
ಕೊಪ್ಪಳ, ಜು.6: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ಈ ಹೊತ್ತಿನ ವರೆಗೂ ಬಿಜೆಪಿ ಪಕ್ಷದಲ್ಲಿ ಇದ್ದೇನೆ. ಮುಂದೆ ಏನಾಗುತ್ತದೋ ಗೊತ್ತಿಲ್ಲ ಎಂದು ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಡೇಸುಗೂರು ಹೇಳಿದ್ದಾರೆ.
ಬಸವರಾಜ ಡಡೇಸುಗೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಸುದ್ದಿಗಾರರು ಅವರಲ್ಲಿ ಸ್ಪಷ್ಟನೆ ಕೇಳಿದಾಗ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ನನಗೆ ಯಾವುದೇ ಪಕ್ಷದಿಂದಲೂ ಆಫರ್ ಬಂದಿಲ್ಲ ಎಂದರು.
Next Story