ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಸಾವು
ಶಿವಮೊಗ್ಗ, ಜು. 6: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 206 ರ ಭದ್ರಾ ನದಿ ಸೇತುವೆಯ ಬಳಿ ನಡೆದಿದೆ.
ಮುನಿಸ್ವಾಮಿ ಮೃತಪಟ್ಟವರೆಂದು ಗುರುತಿಸಲಾಗಿದೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story