ಸಂಬಂಧಿಯಿಂದಲೇ ವಿದ್ಯಾರ್ಥಿನಿಯ ಅತ್ಯಾಚಾರ: ಪ್ರಕರಣ ದಾಖಲು
ಶಿವಮೊಗ್ಗ, ಜು. 14: ಸಂಬಂಧಿಯೋರ್ವನೇ 9 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಐದಾರು ತಿಂಗಳ ಹಿಂದೆ ಶಾಲೆಗೆ ರಜೆಯಿದ್ದಾಗ ಸಂತ್ರಸ್ತೆಯ ಮನೆಗೆ ಬಂದಿದ್ದ ಆರೋಪಿಯು, ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ.
ಕೆಲವು ದಿನಗಳ ಹಿಂದೆ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಮನೆಯವರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿಯು ಗರ್ಭೀಣಿಯಾಗಿರುವುದು ಗೊತ್ತಾಗಿದೆ ಎನ್ನಲಾಗಿದೆ. ಸಂತ್ರಸ್ತೆಯ ಹೇಳಿಕೆ ಆಧರಿಸಿ ಹೊಸನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
Next Story