ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜು.16: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪೀಲ್ ಮೋಹನ್ರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
Next Story