ವರದಕ್ಷಿಣೆ ಕಿರುಕುಳ: ಆತ್ಮಹತ್ಯೆಗೆ ಶರಣಾದ ಗೃಹಿಣಿ
ಶಿವಮೊಗ್ಗ, ಜು. 20: ಪತಿ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಚಿಕ್ಕಜಂಬೂರು ಗ್ರಾಮದಲ್ಲಿ ನಡೆದಿದೆ.
ರುಹಿನಾ ಕೌಸರ್ (22) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಪತಿ ರೋಷನ್ ಬೇಗ್, ಅತ್ತೆ, ಮಾವ ಹಾಗೂ ನಾದಿನಿಯವರ ವಿರುದ್ಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ವರದಕ್ಷಿಣೆ ತರುವಂತೆ ರುಹಿನಾ ಕೌಸರ್ ಗೆ ಪತಿ ಮನೆಯವರು ಹಿಂಸೆ ನೀಡುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದ ರುಹಿನಾ ಕೌಸರ್ ಇತ್ತೀಚೆಗೆ ವಿಷ ಸೇವಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story