ಸಿಇಟಿ-2019: ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಜು.27: ಸರಕಾರದ ನಿರ್ದೇಶನದಂತೆ 2019ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅರ್ಹತೆಯನ್ನು ಪಡೆದು ಸಿಇಟಿ-2019ಕ್ಕೆ ಹಾಜರಾಗಿರುವ ಅಭ್ಯರ್ಥಿಗಳಿಗೆ ಎರಡನೆ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿಯುವ ಇಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
2019ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳ ಅಂಕಗಳನ್ನು ನೇರವಾಗಿ ಇಲಾಖೆಯಿಂದ ಪಡೆದು ಇಂಜಿನಿಯರಿಗ್ ರ್ಯಾಂಕ್ ಫಲಿತಾಂಶವನ್ನು ಜು.27ರಂದು ಬೆಳಗ್ಗೆ 11 ಗಂಟೆಗೆ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ. ಇತರೆ ಬೋರ್ಡ್ಗಳಿಂದ(ಸಿಬಿಎಸ್ಇ, ಸಿಐಎಸ್ಸಿಇ, 10+2) 2019ನೇ ಸಾಲಿನಲ್ಲಿ 12ನೇ ತರಗತಿಯನ್ನು ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಸಿಇಟಿ-2019ನೇ ಸಾಲಿನ ಪ್ರವೇಶ ಪತ್ರದೊಂದಿಗೆ ಪ್ರಾಧಿಕಾರಕ್ಕೆ ಜು.29ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ.
ದಾಖಲಾತಿ ಪರಿಶೀಲನೆಯು ಜು.30 ಹಾಗೂ 31ರಂದು ಎಲ್ಲ ಸಹಾಯಕ ಕೇಂದ್ರಗಳಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಗೆ ಭೇಟಿ ನೀಡುವಂತೆ ಕೋರಲಾಗಿದೆ.