ಸ್ಪೀಕರ್ ಸ್ಥಾನಕ್ಕೆ ಕಾಗೇರಿ ನಾಮಪತ್ರ
ಬೆಂಗಳೂರು, ಜು.30: ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಬಿಜೆಪಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದರು.
ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
ಸೋಮವಾರ ತನಕ ಸ್ಪೀಕರ್ ಹುದ್ದೆಗೆ ಕೆ.ಜಿ.ಬೋಪಯ್ಯನವರೇ ಬಿಜೆಪಿ ಅಭ್ಯರ್ಥಿ, ಅವರೇ ಆಯ್ಕೆಯಾಗುವುದು ಖಚಿತ ಎನ್ನಲಾಗಿತ್ತು. ಬೋಪಯ್ಯ ಈ ಹಿಂದೆಯೂ ಬಿಜೆಪಿ ಸರಕಾರದ ಅವಧಿಯಲ್ಲಿ ವಿಧಾನಸಭೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು
ಇದೀಗ ದಿಢೀರನೆ ಬಿಜೆಪಿ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯ ಬದಲಾವಣೆಯಾಗಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಹೊಸ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Next Story