ಉನ್ನಾವೋ ಅತ್ಯಾಚಾರ ಪ್ರಕರಣ : ಶಾಸಕ ಕುಲದೀಪ್ ಸೆಂಗರ್ ಬಿಜೆಪಿಯಿಂದ ಉಚ್ಛಾಟನೆ
ಲಕ್ನೋ ಆ.1: ಉನ್ನಾವ್ ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಗೈದ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.
2017ರಲ್ಲಿ ಉನ್ನಾವ್ ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕುಲದೀಪ್ ಸಿಂಗ್ ಸೆಂಗರ್ ಪ್ರಮುಖ ಆರೋಪಿ.
ಕೆಲವು ದಿನಗಳ ಹಿಂದೆ ಸಂತ್ರಸ್ತೆ ಬಾಲಕಿ ಪ್ರಯಾಣಿಸುತ್ತಿದ್ದ ಕಾರ್ ಗೆ ಟ್ರಕ್ಕ್ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಸೆಂಗರ್ ಸೇರಿದಂತೆ 25 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಸಂತ್ರಸ್ತೆಯ ಸಂಬಂಧಿಕರಿಬ್ಬರು ಮೃತಪಟ್ಟಿದ್ದರು.
ಸಂತ್ರಸ್ತೆ ಮತ್ತು ಆಕೆಯ ವಕೀಲರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತ ಪ್ರಕರಣದ ಬಗ್ಗೆ ತನಿಖೆ ನಡೆಸಿ ವಾರದೊಳಗೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಸಿಬಿಐಗೆ ಸೂಚಿಸಿದ್ದು, ಇದೇ ವೇಳೆ ಉನ್ನಾವೋ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಉತ್ತಪ್ರದೇಶದಿಂದ ದಿಲ್ಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ
Next Story