ಚಾರ್ಮಾಡಿ: ಕಂದಕಕ್ಕೆ ಉರುಳಿದ ಲಾರಿ, ಇಬ್ಬರಿಗೆ ಗಾಯ
ಚಿಕ್ಕಮಗಳೂರು, ಆ.2: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 60 ಅಡಿ ಕಂದಕಕ್ಕೆ ಉರುಳಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಎರಡನೇ ತಿರುವಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಚಾಲಕ ಹಾರಿಸ್ ಹಾಗೂ ನಿರ್ವಾಹಕ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳ್ಳಾರಿಯಿಂದ ಧರ್ಮಸ್ಥಳ ಕಡೆಗೆ ಕುರಿ ಗೊಬ್ಬರ ಸಾಗಿಸುತ್ತಿದ್ದ ಲಾರಿ ಚಾರ್ಮಾಡಿಯಿಂದ ಕೊಟ್ಟಿಗೆಹಾರಕ್ಕೆ ಹೋಗುವ ಘಾಟ್ ರಸ್ತೆಯ ಎರಡನೇ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿಉರುಳಿದ ಲಾರಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Next Story