ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆ. 15: ‘ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆಯೇನೋ ಎಂಬಂತೆ ಭಾಸವಾಗುತ್ತಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆಯಿಲ್ಲದವರು ಆಡಳಿತದ ಚುಕ್ಕಾಣಿ ಹಿಡಿದಾಗ ಇಂತಹ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಸಂದಿಗ್ಧ ಪರಿಸ್ಥಿತಿಯಿಂದ ದೇಶವನ್ನು ಹೊರತರುವ ಹೊಣೆ ನಮ್ಮೆಲ್ಲರ ಮೇಲಿದೆ’ ಎಂದು ತಿಳಿಸಿದ್ದಾರೆ.
Next Story