ಹನೂರು : ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಮೃತ್ಯು
ಹನೂರು : ತುಂತುರು ಮಳೆಗೆ ಮನೆಯ ಗೋಡೆ ಕುಸಿದು ಮೈಮೇಲೆ ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಬಂಡಳ್ಳಿ ಗ್ರಾಮ ನಿವಾಸಿ ರತ್ನಮ್ಮ (60) ಮೃತರು ಎಂದು ಗುರುತಿಸಲಾಗಿದೆ.
ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
Next Story