ದಾವಣಗೆರೆ ಜಿಲ್ಲಾಧಿಕಾರಿಯಾಗಿ ಮಹಾಂತೇಶ್ ಜಿ. ಬೀಳಗಿ ಅಧಿಕಾರ ಸ್ವೀಕಾರ
ದಾವಣಗೆರೆ, ಆ.20: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಮಹಾಂತೇಶ್ ಜಿ. ಬೀಳಗಿ ಇವರು ಅಧಿಕಾರ ವಹಿಸಿಕೊಂಡರು.
ಮಂಗಳವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಅವರು ಪುಷ್ಪ ಗುಚ್ಚ ನೀಡಿ ಸ್ವಾಗತಿಸಿದರು. ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಬೀಳಗಿ ಅವರು ಬೀದರ್ ಜಿ.ಪಂ ನ ಕಾರ್ಯನಿರ್ವಾಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.
Next Story