ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಕೆ
ಬೆಂಗಳೂರು, ಆ.21: ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕಿಯೆಯನ್ನು ಆ.23 ರಿಂದ ಮುಂದುವರಿಸಲಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದ ವರ್ಗಾವಣಾ ವೇಳಾಪಟ್ಟಿಯ ಮಾಹಿತಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಕೌನ್ಸಿಲಿಂಗ್ನಲ್ಲಿ ಭಾಗವಹಿಸುವ ಶಿಕ್ಷಕರಿಗೆ ಪ್ರತ್ಯೇಕವಾಗಿ ಸೂಚನೆಯನ್ನು ನೀಡಲಾಗುವುದಿಲ್ಲ. ಈ ಮಾಹಿತಿಯನ್ನು ಅಧಿಕೃತ ಎಂದು ಪರಿಗಣಿಸಿ, ವೇಳಾಪಟ್ಟಿಯಂತೆ ಕೌನ್ಸಿಲಿಂಗ್ಗೆ ಹಾಜರಾಗಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story