ನಿಯಮಾವಳಿ ವಿರುದ್ಧವಾಗಿ ಆಯುಕ್ತರ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆ.21: ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಮಾವಳಿ ವಿರುದ್ಧವಾಗಿ ಜಂಟಿ ಆಯುಕ್ತರು, ಉಪ ಆಯುಕ್ತರನ್ನು ನಿಯೋಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಪಾಲಿಕೆ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯ ಪೀಠದಲ್ಲಿ ನಡೆಯಿತು. ಸರಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಆ.29ಕ್ಕೆ ಮುಂದೂಡಿತು.
Next Story