ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಾಳೆ ನಳೀನ್ ಕುಮಾರ್ ಕಟೀಲ್ ಪದಗ್ರಹಣ
ಬೆಂಗಳೂರು, ಆ. 26: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ನಾಳೆ(ಆ.27) ಇಲ್ಲಿನ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ್ ಭವನದಲ್ಲಿ ಪದಗ್ರಹಣ ಮಾಡಲಿದ್ದಾರೆ.
ಬಿಜೆಪಿ ಹಿಂದಿನ ರಾಜ್ಯಾಧ್ಯಕ್ಷರೂ ಆಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನೂತನ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಮಂಗಳವಾರ ಬೆಳಗ್ಗೆ 10:15ರ ಸುಮಾರಿಗೆ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರು, ಶಾಸಕರು, ಪದಾಧಿಕಾರಿಗಳು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
Next Story