ಗೌರಿ ಗಣೇಶ ಹಬ್ಬ: ಆ.30, 31ಕ್ಕೆ ಕೆಎರ್ಸ್ಸಾಟಿಸಿ ವಿಶೇಷ ಸಾರಿಗೆ ವ್ಯವಸ್ಥೆ
ಬೆಂಗಳೂರು, ಆ.27: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎರ್ಸ್ಸಾಟಿಸಿಯು ಆ.30ರಿಂದ 31ರವರೆಗೆ ನಗರದಿಂದ ರಾಜ್ಯದ ವಿವಿಧ ಸ್ಥಳಗಳಿಗೆ 1,800 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದು, ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಸೆ.2ರಂದು ವಿಶೇಷ ವಾಹನಗಳ ವ್ಯವಸ್ಥೆಯನ್ನು ಮಾಡಿರುವುದಾಗಿ ತಿಳಿಸಿದೆ.
ನಗರದ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರ ನಾಡು, ಕುಕ್ಕೇಸುಬ್ರಮಣ್ಯ ಹಾಗೂ ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇ-ಟಿಕೇಟ್ ಬುಕ್ಕಿಂಗ್ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರಾಜ್ಯದಲ್ಲಿ ಇರುವ 707 ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತುಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಲ್ಪಸಿರುವುದಾಗಿ ಕೆಎರ್ಸ್ಸಾಟಿಸಿ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ
ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾಂ, ಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ತಿರುಪತಿ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ
ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ.
ಶಾಂತಿನಗರದ ಕೇಂದ್ರ ಘಟಕ-4 ಮತ್ತು ಘಟಕ-2ರಿಂದ
ತಮಿಳುನಾಡು ಮತ್ತು ಆಂಧ್ರಪ್ರದೇಶ ಹಾಗೂ ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳು.