ಡಿಕೆಶಿ ಬಂಧನ ವಿರೋಧಿಸಿ ಹನೂರಿನಲ್ಲಿ ಪ್ರತಿಭಟನೆ
ಹನೂರು : ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಹನೂರು ಪಟ್ಟಣದಲ್ಲಿ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ ನಡೆಯಿತು. ಚಾಮರಾಜನಗರ ಜಿಲ್ಲೆಯ ಹನೂರಿನ ಮುಖ್ಯ ರಸ್ತೆಗಳಲ್ಲಿ ಕಾಂಗ್ರೆಸ್ , ಜೆಡಿಎಸ್ ಕಾರ್ಯಕರ್ತರು ಹಾಗೂ ಡಿ ಕೆ ಶಿವಕುಮಾರ್ ಅಭಿಮಾನಿ ಗಳಿಂದ ಪ್ರತಿಭಟನೆ ನಡೆಯಿತು.
ಹನೂರು ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಡಿಕೆಶಿ ಬಂಧನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Next Story