ಶಿಕ್ಷಕರ ದಿನಾಚರಣೆ: ಕೊಡಗಿನ 8 ಮಂದಿಗೆ 'ಉತ್ತಮ ಶಿಕ್ಷಕ ಪ್ರಶಸ್ತಿ' ಪ್ರದಾನ
ಮಡಿಕೇರಿ ಸೆ.5 : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ 'ಉತ್ತಮ ಶಿಕ್ಷಕ ಪ್ರಶಸ್ತಿ'ಯನ್ನು ಜಿಲ್ಲೆಯ 8 ಶಿಕ್ಷಕರಿಗೆ ಪ್ರದಾನ ಮಾಡಲಾಯಿತು.
ನಗರದ ಸಂತ ಜೋಸೆಫರ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಯಿತು.
ಪ್ರೌಢ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಚೆಂಬು ಸ. ಪ್ರೌ.ಶಾಲೆಯ ಮುಖ್ಯ ಶಿಕ್ಷಕಿ ದೇಚಮ್ಮ, ಸೋಮವಾರಪೇಟೆ ತಾಲೂಕಿನ ನೇರುಗಳಲೆ ಸ.ಪ್ರೌ ಶಾಲೆಯ ಸಹ ಶಿಕ್ಷಕ ಎಸ್.ಎಂ.ಇಬ್ರಾಹಿಂ, ವಿರಾಜಪೇಟೆ ತಾಲೂಕಿನ ಬೆಕ್ಕೆಸೊಡ್ಲುರು ಶಾರದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಆರ್.ಬಸವರಾಜು,
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಚೆರಿಯಪರಂಬು ಸ.ಹಿ.ಪ್ರಾ ಶಾಲೆಯ ಸಹಶಿಕ್ಷಕ ಟಿ.ಹೆಚ್.ಸುಕುಮಾರ್, ಸೋಮವಾರಪೇಟೆ ತಾಲೂಕಿನ ಕೂಡಿಗೆ ಸ.ಮಾ.ಪ್ರಾ.ಶಾಲೆಯ ದೈಹಿಕ ಶಿಕ್ಷಕ ಎಂ.ಎ.ಆನಂದ್, ವಿರಾಜಪೇಟೆ ತಾಲೂಕಿನ ಬೇಟೋಳಿ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಬಿ.ಸೀತಾ ಹಾಗೂ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕಿನ ಹಳೆ ಚೆಂಬು ಸ.ಕಿ.ಪ್ರಾ ಶಾಲೆಯ ಸಹ ಶಿಕ್ಷಕ ಸೆಲೆಸ್ಟಿನ್ ಲೋಬೋ ಹಾಗೂ ಸೋಮವಾರಪೇಟೆ ತಾಲೂಕಿನ ದೊಡ್ಡಭಂಡಾರ ಸ.ಕಿ.ಪ್ರಾ. ಶಾಲೆಯ ಸಹಶಿಕ್ಷಕ ಬಿ.ಟಿ.ವಿಶ್ವನಾಥ್ ಪ್ರಶಸ್ತಿ ಪಡೆದುಕೊಂಡರು.
ಶಾಸಕ ಕೆ.ಜಿ.ಬೋಪಯ್ಯ ಹಾಗೂ ಜಿ.ಪಂ ಪ್ರತಿನಿಧಿಗಳು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.