ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ಈಡಿ ನೋಟಿಸ್
ಬೆಂಗಳೂರು, ಸೆ.17: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ಜಾರಿ ನಿರ್ದೇಶನಾಲಯ(ಈಡಿ)ದ ಅಧಿಕಾರಿಗಳು ನೋಟಿಸ್ ನೀಡಿದ್ದು, ಸೆ.19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ.ಡಿ. ಅಧಿಕಾರಿಗಳು ನೋಟಿಸ್ ನೀಡಿರುವುದನ್ನು ಖಚಿತಪಡಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ ಬೆಂಗಳೂರಿನಿಂದ ಹೊಸದಿಲ್ಲಿಗೆ ತೆರಳುತ್ತಿದ್ದೇನೆ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Next Story