ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಸೆ.17: ಟಿಪ್ಪು ಸುಲ್ತಾನ್ ಜಯಂತಿಯನ್ನು ರಾಜ್ಯ ಬಿಜೆಪಿ ಸರಕಾರ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಉತ್ತರಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಶಾ, ಟಿಪ್ಪು ರಾಷ್ಟ್ರೀಯ ಸೇವಾ ಸಂಘ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಿ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿದ್ದಲ್ಲದೆ, ಇದು ಸಂವಿಧಾನದ ಅನುಚ್ಚೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
Next Story