ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆ.19: ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮಕ್ಕಳು, ವ್ಯಕ್ತಿ, ಸಂಸ್ಥೆಗಳು ಅರ್ಜಿಗಳನ್ನು ಸೆ.30ರೊಳಗೆ www.nca-wcd.nic.in ನಲ್ಲಿ ಅರ್ಹ ನಾಮ ನಿರ್ದೇಶಿತರು ಪ್ರಸ್ತಾವನೆಗಳನ್ನು ಭಾರತ ಸರಕಾರಕ್ಕೆ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story