ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 7.57 ಲಕ್ಷ ರೂ. ದಂಡ ವಸೂಲಿ
ಬೆಂಗಳೂರು, ಸೆ. 21: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ) ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಮಾಣ ಮಾಡುತ್ತಿದ್ದ ಒಟ್ಟು 5,972 ಪ್ರಯಾಣಿಕರನ್ನು ಪತ್ತೆ ಮಾಡಿದ್ದು, ಅವರಿಂದ ಒಟ್ಟು 7.57ಲಕ್ಷ ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿದೆ.
ಆಗಸ್ಟ್ ತಿಂಗಳಲ್ಲಿ ಸಂಸ್ಥೆಯ ತನಿಖಾ ತಂಡಗಳು ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 46,718 ವಾಹನಗಳನ್ನು ತನಿಖೆಗೊಳಪಡಿಸಿ 5,093 ಪ್ರಕರಣಗಳನ್ನು ಪತ್ತೆಹಚ್ಚಿ, 5,972 ಟಿಕೆಟ್ ರಹಿತ ಪ್ರಯಾಣಿಕರಿಂದ 7,57,958 ರೂ.ದಂಡ ವಸೂಲಿ ಮಾಡಿರುತ್ತಾರೆ. ಅಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,03,681 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ದ ಇಲಾಖೆ ರೀತಿ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
Next Story