ಉಪ ಚುನಾವಣೆ: 17 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು, ಸೆ.24: ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೆ ದಿನ ಸೇರಿದಂತೆ ಇದುವರೆಗೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಯಾಗಿ ಹಾಗೂ ಸ್ವತಂತ್ರ ಅಭ್ಯರ್ಥಿಗಳಾಗಿ 17 ಜನರು ನಾಮಪತ್ರ ಸಲ್ಲಿಸಿದ್ದಾರೆ.
ವಿವಿಧ ರಾಷ್ಟ್ರೀಯ ಪಕ್ಷಗಳಿಂದ 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ, ಸ್ವತಂತ್ರ ಅಭ್ಯರ್ಥಿಗಳಾಗಿ ಐದು ಜನ ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನಿಂದ ಯಾವುದೇ ಅಭ್ಯರ್ಥಿಗಳು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿಲ್ಲ.
ಎಲ್ಲೆಲ್ಲಿ, ಎಷ್ಟು ನಾಮಪತ್ರ ಸಲ್ಲಿಕೆ: ಅಥಣಿಯಲ್ಲಿ 4, ಕಾಗವಾಡದಲ್ಲಿ 5, ಗೋಕಾಕ 1, ರಾಣೆಬೆನ್ನೂರು 1, ಚಿಕ್ಕಬಳ್ಳಾಪುರ 1, ಕೆ.ಆರ್.ಪುರಂ 1, ಶಿವಾಜಿನಗರ 1, ಹೊಸಕೋಟೆ 1 ಹಾಗೂ ಕೆ.ಆರ್.ಪೇಟೆ ಕ್ಷೇತ್ರದಲ್ಲಿ 2 ಸೇರಿದಂತೆ 17 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
Next Story