ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಜಾ
ಹೊಸದಿಲ್ಲಿ, ಸೆ.18: ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹೊಸದಿಲ್ಲಿಯ ಪಿಎಂಎಲ್ಎ ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ಹೀಗಾಗಿ ಡಿ.ಕೆ.ಶಿವಕುಮಾರ್ ಇನ್ನೂ ಹಲವು ದಿನಗಳ ಕಾಲ ತಿಹಾರ್ ಜೈಲಿನಲ್ಲಿ ಕಾಲ ಕಳೆಯಬೇಕಾಗುತ್ತದೆ.
ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ತೀರ್ಪು ನೀಡಿದರು. ಜಾಮೀನು ಅರ್ಜಿ ವಜಾಗೊಳಿಸಿರುವುದಾಗಿ ಅವರು ಒಂದು ಸಾಲಿನ ತೀರ್ಪು ಪ್ರಕಟಿಸಿದರು. ಹೀಗಾಗಿ ಡಿಕೆಶಿ ತಿಹಾರ್ ಜೈಲು ವಾಸ ಮುಂದುವರಿದಿದೆ.
ಸೆ.17 ರಂದು ಡಿಕೆಶಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಆರೋಗ್ಯ ತಪಾಸಣೆಯ ಅಗತ್ಯವಿದೆಯೆಂದು ಡಿಕೆಶಿ ಪರ ವಕೀಲರು ಮನವಿ ಮಾಡಿದ್ದರಿಂದ ಡಿಕೆಶಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದರು. ಅದರಂತೆ ಡಿಕೆಶಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಲ್ಲಿಂದ ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.
Next Story