ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ: 'ಆರೆಂಜ್ ಅಲರ್ಟ್' ಘೋಷಣೆ
ಸಾಂದರ್ಭಿಕ ಚಿತ್ರ
ಮಡಿಕೇರಿ, ಸೆ.25: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸೆ.26 ರ ಮಧ್ಯಾಹ್ನದವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಗುರುವಾರ ಮಧ್ಯಾಹ್ನದವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ. ನಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ತಿಳಿಸಿದೆ.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೆಲವೆಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಉಳಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ದಟ್ಟ ಮೋಡ, ಮಂಜು ಮತ್ತು ತುಂತುರು ಮಳೆಯ ವಾತಾವರಣ ಕಂಡು ಬಂದಿತು.
Next Story