ಬಸ್ಗೆ ಕಾರು ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು
ಮಂಡ್ಯ, ಅ.3: ಚಾಲಕನ ನಿಯಂತ್ರಣ ತಪ್ಪಿ ಇನ್ನೋವ ಕಾರು ಖಾಸಗಿ ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ಗಣಂಗೂರು ಬಳಿ ಬುಧವಾರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರು ಮೈಸೂರಿನ ನಿವಾಸಿಗಳಾದ ಮುದಸ್ಸೀರ್ ಅಹಮದ್ ಷರೀಫ್(30) ಹಾಗು ಕಾರು ಚಾಲನೆ ಮಾಡುತ್ತಿದ್ದ ತಜ್ಬುಲ್ ರಾಜ್ (40) ಎಂದು ತಿಳಿದು ಬಂದಿದೆ.
ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾರಿ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ಗೆ ಢಿಕ್ಕಿಯೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story