ಸ್ಪೀಕರ್ ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ: ಸಿದ್ದರಾಮಯ್ಯ
ಬೆಂಗಳೂರು, ಅ.12: ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ಪೀಕರ್ ಕಾಗೇರಿ ಆದೇಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಸಿದ್ದರಾಮಯ್ಯ ಅವರ ವಿಡಿಯೋ ತುಣುಕನ್ನು ಟ್ವೀಟ್ ಮಾಡಿದ ಬಿಜೆಪಿಗೆ ತಿರುಗೇಟು ನೀಡಿದ ಅವರು, ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಉತ್ತರಿಸಿದ್ದಾರೆ.
"ಸ್ಪೀಕರ್ ಕಾಗೇರಿಯವರ ಜೊತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಖಂಡನೀಯ ಎಂದು ಅವರು ಮತ್ತೊಂದು ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ.
— Siddaramaiah (@siddaramaiah) October 12, 2019
ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ. https://t.co/IDimhsWDXl